ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ನಡೆಸುತ್ತಿರುವ ಜಾತಿವಾರು ಶೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆರು ಜನ ಅಂಗನವಾಡಿ ಕಾರ್ಯಕರ್ತೆಯರು ಕರ್ತವ್ಯದಲ್ಲಿ ನಿರ್ಲಕ್ಷ ತೋರಿದ ಆರೋಪದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಬೆಳಗ್ಗೆ ಇಂಥ ಆದೇಶ ಹೊರಬಂದಿದ್ದು, ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ನಿರ್ಲಕ್ಷ ತೋರಿದ್ದರಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.