ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದು ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ನೈಜೀರಿಯನ್ ಪ್ರಜೆಯನ್ನ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಚಿಕೋಜಿ ಹೇಡಾಹಾ ಬಂಧಿತ ಆರೋಪಿಯಾಗಿದ್ದು, ಆತನಿಂದ ಬರೋಬ್ಬರಿ 2.30 ಕೋಟಿ ರೂ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಕುರಿತು ಸೆಪ್ಟೆಂಬರ್ 2ರಂದು ಮಧ್ಯಾಹ್ನ 12:30ಕ್ಕೆ ಮಾಹಿತಿ ನೀಡಿದ ಪೊಲೀಸರು, "ಬಾಗಲೂರಿನ ಸಂತೆ ಸರ್ಕಲ್ - ಸಿಎಂಆರ್ ಕಾಲೇಜ್ ನಡುವಿನ ಮಾರ್ಗದಲ್ಲಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದಾಗ ಆರೋಪಿಯನ್ನ ಬಂಧಿಸಲಾಗಿದೆ" ಎಂದು ಪೊಲೀಸರು ತಿಳಿಸಿದರು