ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಶಿವಮೊಗ್ಗ ನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಸಮಾಜದಲ್ಲಿ ಅನುಚಿತ ವರ್ತನೆ ತೋರುವ ಒಂದು ಸಾವಿರಕ್ಕಿಂತ ಹೆಚ್ಚು ಜನರನ್ನ ಪತ್ತೆ ಹಚ್ಚಿ ಅವರನ್ನು ಠಾಣೆಗೆ ಕರೆಸಿ ಎಚ್ಚರಿಕೆಯನ್ನು ನೀಡಲಾಗಿದೆ.ಅಲ್ಲದೇ ಗಡಿಪಾರು ಮಾಡುವ ಕೆಲಸವನ್ನ ವಿಶೇಷವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದರು.