ಜಪಾನ್ ದೇಶದ ಪ್ರಮುಖ ಕೈಗಾರಿಕಾ ನಗರಗಳಾಗಿರುವ ಒಸಾಕಾ ಮತ್ತು ನಗೋಯಾ ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನಸೇವೆ ಆರಂಭಿಸುವ ಕುರಿತು ಬೆಂಗಳೂರಿನಲ್ಲಿ ಇರುವ ಆ ದೇಶದ ಕಾನ್ಸುಲ್ ಜನರಲ್ ಜತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚರ್ಚಿಸಿದ್ದಾರೆ. ಅವರು ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು ಅವರೊಂದಿಗೆ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಜಪಾನ್ ಜತೆ ಬಂಡವಾಳ ಹೂಡಿಕೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಬಂಧ, ಹಾಗೂ ಭಾಷಾ ಕಲಿಕೆಯಂತಹ ಕೌಶಲ್ಯ ಬಲವರ್ಧನೆಗೆ ರಾಜ್ಯ ಸರಕಾರದ ಮೂಲಕ ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.