ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು "ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು, ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸು ವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಎಸ್.ಐ.ಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಗುರುವಾರ ರಾತ್ರಿ ಬೆಳ್ತಂಗಡಿ ಎಸ್ ಐ ಟಿ ಕಚೇರಿಗೆ ಮಹೇಶ್ ಶೆಟ್ಟಿ ಭೇಟಿ ನೀಡಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರನ್ನು ನೀಡಿದ್ದಾರೆ. ಇದರೊಂದಿಗೆ ಮಾಹಿತಿ ಹಕ್ಕಿನಲ್ಲಿ ಪಡೆದಿದ್ದ ದಾಖಲೆಗಳನ್ನು ನೀಡಿರುವುದಾಗಿ ತಿಳಿದು ಬಂದಿದೆ.