ಭಾನುವಾರ ಹರಿಹರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ: ಪಟ್ಟಣದ ಸೂಕ್ಷ್ಮ ಪ್ರದೇಶಗಳಿಗೆ ಎಸ್ಪಿ ಉಮಾ ಭೇಟಿ, ಪರಿಶೀಲನೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಸ್ಥಾಪನೆ ಮಾಡಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆಯನ್ನು ನಾಡಿದ್ದು ಭಾನುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಪೇಟೆ ಆಂಜನೇಯ ದೇವಸ್ಥಾನದಿಂದ ಶೋಭಾಯಾತ್ರೆ ಆರಂಭವಾಗಲಿದ್ದು ಸುಮಾರು 50 ಸಾವಿರ ಜನ ಸೇರುವ ನಿರೀಕ್ಷೆ ಕೂಡ ಇದೆ. ಹಾಗಾಗಿ ಶುಕ್ರವಾರ ಸಂಜೆ 6 ಗಂಟೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಪಟ್ಟಣದ ಸೂಕ್ಷ್ಮ ಸ್ಥಳಗಳಿಗೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.