ನಗರದ ನೂರಡಿ ಜೋಡಿ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅಳವಡಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಪರಿಶಿಷ್ಠ ನಿವಾಸಿಗಳು ಪ್ರತಿಭಟನೆ ನಡೆಸಿದರು. ನಗರಸಭೆ 1976ರಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಡಾ.ಬೆಸಗರಹಳ್ಳಿ ರಾಮಣ್ಣ ವೃತ್ತದವರೆಗಿನ ರಸ್ತೆಗೆ ಡಾ.ಬಿ.ಆರ್.ಅಂಬೇಡ್ಕರ್ ಜೋಡಿ ರಸ್ತೆ ಎಂದು ನಾಮಕಾರಣ ಮಾಡಲಾಗಿತ್ತು. ಇದೀಗ ರಸ್ತೆಗೆ ನಾಮಫಲಕ ಅಳವಡಿಸಲು ಸೂಚಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ರಸ್ತೆ ನೂರಡಿ ರಸ್ತೆ ಎಂದು ಕರೆಯಲ್ಪಡುತ್ತಿದೆ. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಸಮಿತಿ ನೂರಡಿ ರಸ್ತೆಗೆ ನಾಡಪ್ರಭು ಕೆಂಪೇಗೌಡ ರಸ್ತೆ ನಾಮಕರಣಕ್ಕೆ ಮನವಿ ಸಲ್ಲಿಸಿದರು.