ಮದ್ದೂರು ತಾಲ್ಲೂಕು ಭಾರತೀನಗರ ಅಂಬೇಡ್ಕರ್ ಭವನದಲ್ಲಿ ಶ್ರೀವಿಶ್ವೇಶ್ವರಯ್ಯ ಪತ್ತಿನ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶ್ರೀವಿಶ್ವೇಶ್ವರಯ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಗಿರೀಶ್ ಮಾತನಾಡಿ, ಶ್ರೀವಿಶ್ವೇಶ್ವರಯ್ಯ ಪತ್ತಿನ ಸಹಕಾರ ಸಂಘವನ್ನು ಅಭಿವೃದ್ದಿ ಪಡಿಸಲು ಷೇರುದಾರರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. 2024-2025 ನೇ ಸಾಲಿನಲ್ಲಿ 3.34 ಲಕ್ಷ ನಿವ್ವಳಲಾಭ ಗಳಿಸಿದ್ದು ಪ್ರಸಕ್ತ ವರ್ಷದಲ್ಲಿ ಮತ್ತಷ್ಟು ಹೆಚ್ಚು ಲಾಭಗಳಿಸಬೇಕಾದರೆ ಷೇರುದಾರರು ಆಡಳಿತ ಮಂಡಳಿಗೆ ಸಹಕಾರ ನೀಡಬೇಕು. ಹೆಚ್ಚು ಹೆಚ್ಚು ಷೇರುಗಳನ್ನು ಕಟ್ಟಿ ಉಳಿತಾಯ ಖಾತೆಯನ್ನು ತೆರೆಯಬೇಕೆ