ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾ ವಿತರಕರ ಸಂಘದಿಂದ ಆಯೋಜಿಸಿದ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬಳಿಕ ಸಂಘದ ಅಧ್ಯಕ್ಷ ಪುರೋಷತ್ತಮ್ ಮಾತನಾಡಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಣಾ ಸಂಘದ ಒಕ್ಕೂಟವು ಆ.28 ರಂದು ಮೈಸೂರಿನಲ್ಲಿ ಐದನೇ ರಾಜ್ಯಮಟ್ಟದ ಸಮಾವೇಶವನ್ನು ಆಯೋಜಿಸಲಾಗಿದೆ, ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ, ಹೀಗಾಗಿ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರು ತಪ್ಪದೆ ಭಾಗವಹಿಸಬೇಕೆಂದು ತಿಳಿಸಿದರು,