ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ 35 ಕುರಿಗಳನ್ನು ಕಚ್ಚಿ ಸಾಯಿಸಿರುವ ಘಟನೆ ತಾಲ್ಲೂಕಿನ ಬೂದಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ತಾಲ್ಲೂಕಿನ ಬೂದಿಹಳ್ಳಿ ಗ್ರಾಮದ ಸಣ್ಣೀರಯ್ಯ ಅವರಿಗೆ ಸೇರಿದ ಕುರಿಗಳ ಮೇಲೆ ನಾಯಿಗಳು ದಾಳಿ ಮಾಡಿವೆ. ಕುರಿ ಮಂದೆಯಲ್ಲಿದ್ದ ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ ಹಿನ್ನಲೆಯಿಂದ 35 ಕುರಿಗಳು ಸಾವನ್ನಪ್ಪಿವೆ. ಸುಮಾರು 2 ಲಕ್ಷ ರೂಗಳು ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪಶು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.