ಜಿಲ್ಲೆಯಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮಾಣಕ್ಕೆ ಕಾರಣವಾದಲ್ಲಿ ದಂಡ ವಿಧಿಸಲಾಗುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಬುಧವಾರ ಸಂಜೆ 5ಕ್ಕೆ ಸರಕಾರದ ಆದೇಶದಂತೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ತಡೆಗಟ್ಟಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ವಿನಿಯಮಗಳು 2024 ರಲ್ಲಿನ ನಿಯಮಗಳ ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಸೂಚಿಸಿದ್ದಾರೆ.