ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಪುರ ಗ್ರಾಮದಲ್ಲಿ ಹುಲಿ ಸೆರೆಹಿಡಿಯಲು ಅರಣ್ಯ ಇಲಾಖೆಯವರು ವಿಫಲರಾಗಿದ್ದಾರೆಂದು ಗ್ರಾಮಸ್ಥರು ಹಾಗೂ ರೈತರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಬೋನಿಗೆ ಕೂಡಿ ಹಾಕಿದ್ದರು. ಈ ಸಂಬಂಧ ರೈತರು ಹಾಗೂ ಗ್ರಾಮಸ್ಥರ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಒಡ್ಡಿ ಎರಡು ಜೀಪ್ ಗಳ ಚಕ್ರದ ಗಾಳಿ ತೆಗೆದು ಅವಾಚ್ಯ ಶಬ್ದದಿಂದ ನಿಂದಿಸಿ ಬೋನಿನಲ್ಲಿ ಕೂಡಿ ಹಾಕಿದರು. ಜೀವಂತ ಸಹಿತ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಬೊಮ್ಮಲಪುರ ಗ್ರಾಮದ ರಘು, ದೀಪು, ಗಂಗಾಧರ ಸ್ವಾಮಿ, ಪ್ರದೀಪ್ ಹಾಗೂ ರೇವಣ್ಣ ವಿರುದ್ಧ ಎಫ್ಐಆರ್ ಹಾಕಲಾಗಿದೆ.