ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಗ್ರಾಮದ ಅಂಬೇಡ್ಕರ್ ಯುವಕ ಸಂಘ ಹಾಗೂ ವಿನಾಯಕ ಗೆಳೆಯರ ಬಳಗದಿಂದ ಪ್ರತ್ಯಕ್ಷವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಐದನೇ ದಿನವಾದ ಭಾನುವಾರ ಸಂಜೆ 6 ಗಂಟೆಗೆ ಗ್ರಾಮದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು. ಈ ವೇಳೆ ಸೌಂಡ್ಸ್ ಸ್ವೀಕರ್ ಗಳ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರತ್ಯೇಕವಾಗಿ ಗಣೇಶನ ಮೂರ್ತಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮದ ನೂರಕ್ಕೆ ಹೆಚ್ಚು ಯುವಕರು ಮೆರವಣಿಗೆಯಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸದರು.