ಬಳ್ಳಾರಿ ಜಿಲ್ಲಾಡಳಿತ, ಸಂಡೂರು ತಾಲ್ಲೂಕು ಆಡಳಿತ ಸಹಯೋಗದಲ್ಲಿ ಸಂಡೂರು ತಾಲ್ಲೂಕಿನ ದೋಣಿಮಲೈನಲ್ಲಿರುವ ಎನ್‌ಎಂಡಿಸಿ ಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಡಿಪ್ಲೋಮಾ ಅಭ್ಯರ್ಥಿಗಳಿಗೆ ಸೆ.08 ರಿಂದ ಸೆ.12 ರ ವರೆಗೆ ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ದೋಣಿಮಲೈನ ಸರ್ಕಾರಿ ಪ್ರೌಢ ಶಾಲೆಯಲ್ಲಿ ನುರಿತ ಉಪನ್ಯಾಸಕರಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬಹುದು ಎಂದು ಸೆಪ್ಟೆಂಬರ್ 6, ಮಧ್ಯಾಹ್ನ 3 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -