ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ. ವಿ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಸೆಪ್ಟೆಂಬರ್ 29ರಂದು ಸಂಜೆ 4 ಗಂಟೆಗೆ ಭೇಟಿ ನೀಡಿ ಗಣತಿದಾರರು ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೆ ಹಾಗೂ ಕೆ.ಎಲ್.ಇ. ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜಾಜಿನಗರ ಮತ್ತು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರಗಳ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದ ತರಬೇತಿ ಕಾರ್ಯಗಾರಕ್ಕೂ ಇದೇ ಸಂದರ್ಭದಲ್ಲಿ ಅವರು ಭೇಟಿ ನೀಡಿದರು