ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಪೂರ್ವ ನಿಗದಿಯಂತೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಆಗಸ್ಟ್ 29ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. ಸಂಜೆ 5.30ರಿಂದ 6.30 ಗಂಟೆವರೆಗೆ ಕೃಷಿ ವಿವಿಯ ಜಗಜ್ಯೋತಿ ಬಸವೇಶ್ವರ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ರಾತ್ರಿ 8.30ಕ್ಕೆ ಕೃಷಿ ವಿವಿ ಅತಿಥಿ ಗೃಹದಲ್ಲಿ ಊಟದ ನಂತರ ವಾಸ್ತವ್ಯ ಮಾಡುವರು.