ಭಾರತೀಯ ವಕೀಲರ ಪರಿಷತ್ ಅಧ್ಯಕ್ಷ ಸದಾಶಿವ ರೆಡ್ಡಿ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಘಟನೆಯನ್ನು ಖಂಡಿಸಿ ಸುರಪುರ ತಾಲೂಕು ವಕೀಲರ ಸಂಘದಿಂದ ಸುರಪುರ ನಗರದ ತಹಸಿಲ್ದಾರ್ ಕಚೇರಿಯ ಮುಂದೆ ಸೋಮವಾರ ಮಧ್ಯಾನ ಪ್ರತಿಭಟನೆ ನಡೆಸಿ ಗೃಹ ಸಚಿವರಿಗೆ ತಹಸಿಲ್ದಾರ್ ಮೂರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ತಾಲೂಕ ಅಧ್ಯಕ್ಷ ರಮಾನಂದ ಕವಲಿ ಸೇರಿದಂತೆ ಅನೇಕ ಜನ ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.