ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ ಜಿ.ವಿ.ಶ್ರೀರಾಮರೆಡ್ಡಿ ಬಡಾವಣೆಯ ನಾಗರೀಕರು. ಬಾಗೇಪಲ್ಲಿ ಪಟ್ಟಣಕ್ಕೆ ಹೊಂದಿಕೊಂಡಿರುವ ಕಸಬಾ ಹೋಬಳಿಯ ಪರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವಂತಹ ಜಿ.ವಿ ಶ್ರೀರಾಮರೆಡ್ಡಿ ಬಡಾವಣೆಯಲ್ಲಿ ರಸ್ತೆ,ಚರಂಡಿ,ಬೀದಿ ದೀಪಗಳು ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ ಅಲ್ಲಿನ ನಿವಾಸಿಗಳು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಅಲ್ಲಿನ ನಿವಾಸಿಗಳು ಹಲವು ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.