ಚನ್ನರಾಯಪಟ್ಟಣ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಸಿಎನ್ ಬಾಲಕೃಷ್ಣ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದವರು, ನಾಡಹಬ್ಬ ದಸರಾ ನಡೆಯುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಿ ವಿಜೇತರಿಗೆ ದಸರಾದಲ್ಲಿ ಸನ್ಮಾನಿಸಿ ಗೌರವಿಸುವ ಪ್ರಕ್ರಿಯೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಬಾರಿ ಕೂಡ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು ವಿಶೇಷವಾಗಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ಮೈಸೂರಿನಲ್ಲಿ ಏರ್ ಶೋ ನಡೆಯುತ್ತಿದೆ ಇದೊಂದು ವಿನೋತನ ಕಾರ್ಯಕ್ರಮವಾಗಿದ್ದು ಮುಂದಿನ ದಿನಗಳಲ್ಲಿ ದಸರಾ ಕಾರ್ಯಕ್ರಮದಲ್ಲಿ ಗಮನ ಸೆಳೆಯಲಿವೆ ಎಂದರು