ಸತತ ಮಳೆಯಿಂದ ಕಟ್ಟಡಗಳು ಕುಸಿದು ಬಿದ್ದಿರುವ ಹಾನಿ ಪ್ರಮಾಣ ಆಧರಿಸಿ ಹೆಚ್ಚಿನ ಪರಿಹಾರ ಕೊಡಿಸುವುದಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ಶಾಸಕ ಡಾ. ಸಿದ್ದು ಪಾಟೀಲ ಅವರು ತಿಳಿಸಿದರು. ನಿರಂತರ ಮಳೆಯಿಂದಾಗಿ ತಾಲೂಕಿನ ಸೋನಕೇರಾ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದು ಆಗಿರುವ ಹಾನಿ ಪರಿಶೀಲನೆಗಾಗಿ ಶನಿವಾರ ಸಂಜೆ 4:30ಕ್ಕೆ ಭೇಟಿನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದರು.