ಬಲ್ಕಲ್ ಗ್ರಾಮದ ಶಾಲೆಗೆ ಮೂಲಭೂತ ಸೌಕರ್ಯ ಹಾಗೂ ಹೆಚ್ಚುವರಿ ಶಿಕ್ಷಕರ ನೇಮಕ ಮಾಡುವಂತೆ ರೈತ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಅಶೋಕ್ ಬಲ್ಕಲ್ ಆಗ್ರಹ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಬಲ್ಕಲ್ ಗ್ರಾಮದ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಬೇಕು ಜೊತೆಗೆ ಶಾಲೆಗೆ ಶಿಕ್ಷಕರ ಕೊರತೆದ್ದು ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲೆಗೆ ಹೆಚ್ಚುವರಿ ಶಿಕ್ಷಕರ ನೇಮಕ ಮಾಡುವಂತೆ ಗ್ರಾಮದಲ್ಲಿ ರೈತ ಸಂಘಟನೆಯ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಅಶೋಕ್ ಸಾಹುಕಾರ್ ಬಲ್ಕಲ್ ಆಗ್ರಹಿಸಿದ್ದಾರೆ. ಅಧಿಕಾರಿಗಳು ಆದಷ್ಟು ಬೇಗ ಎಚ್ಚೆತ್ತುಕೊಳ್ಳದೆ ಹೋದಲ್ಲಿ ಮುಂಬರುವ ದಿನಗಳಲ್ಲಿ ಸಂಬಂಧಪಟ್ಟ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ