ಹಾಸನ: ಕಳೆದ ವರ್ಷ ಹಾಸನಾಂಬ ಉತ್ಸವದ ವೇಳೆ ನಡೆದ ವಿದ್ಯುತ್ ಅವಗಡಕ್ಕೆ ಸಂಬಂಧಪಟ್ಟಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಮನೋಹರ ಅವರು ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಹಾಸನದ ಅಧಿದೇವತೆ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಇದೆ ನ ವೆಂಬರ್ 9 ರಿಂದ ಪ್ರಾರಂಭವಾಗಲಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿ, ಕಳೆದ ಬಾರಿ ನಡೆದ ವಿದ್ಯುತ್ ಅವಘಡಕ್ಕೆ ಸಂಬಂಧಪಟ್ಟಂತೆ ಈವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ ಎಂದರು. ಕಳೆದ ವರ್ಷ ದಾರಿ ಅವಘಡ ಒಂದು ತಪ್ಪಿದೆ ಎಂದರು.