Download Now Banner

This browser does not support the video element.

ಕೊರಟಗೆರೆ: ಅರಸಾಪುರ ಗ್ರಾ.ಪಂ ಅಧ್ಯಕ್ಷೆಯಾಗಿ ಗಂಗರತ್ನಮ್ಮ ಅವಿರೋಧ ಆಯ್ಕೆ

Koratagere, Tumakuru | Sep 12, 2025
ಕೊರಟಗೆರೆ: ತಾಲ್ಲೂಕಿನ ಅರಸಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಗಂಗರತ್ನಮ್ಮ ಎರಡನೇ ಅವಧಿಗೂ ಅವಿರೋಧವಾಗಿ ಶುಕ್ರವಾರ ಮಧ್ಯಾಹ್ನ 3 ಗಂಟೆಯಲ್ಲಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮಂಜುನಾಥ್ ಅಧಿಕೃತವಾಗಿ ಘೋಷಣೆ ಮಾಡಿದರು. ಅಧ್ಯಕ್ಷೆಯಾಗಿ ಆಯ್ಕೆಯಾದ ಗಂಗರತ್ನಮ್ಮ ಮಾತನಾಡಿ, "ಸದಸ್ಯರು ನೀಡಿದ ವಿಶ್ವಾಸಕ್ಕೆ ತಕ್ಕಂತೆ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ" ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಟಿ.ಸಿ ರಾಮಯ್ಯ ಸೇರಿದಂತೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us