ರಾಯಚೂರು ಜಿಲ್ಲೆಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ರೀತಿಯಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗ ಮುನ್ಸೂಚನೆ ನೀಡಿದೆ. ಗುರುವಾರ ಬೆಳಗ್ಗೆ ರಾಯಚೂರು ಕೃಷಿ ವಿಶ್ವವಿದ್ಯಾಲಯದ ಹವಾಮಾನ ಶಾಸ್ತ್ರ ವಿಭಾಗ ಪ್ರಕಟಣೆ ನೀಡಿ, ಸೆಪ್ಟಂಬರ್ 11ರಿಂದ 14ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉತ್ತಮ ರೀತಿಯಲ್ಲಿ ಮಳೆಯಾಗಲಿದ್ದು, ರೈತರು ತಮ್ಮ ಬೆಳೆಗಳ ರಕ್ಷಣೆಗಾಗಿ ಜಮೀನುಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಬದುಗಳನ್ನು ಸರಿಯಾಗಿ ಹಾಕಿಕೊಳ್ಳಬೇಕು. ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.