ಚಿಕ್ಕಬಳ್ಳಾಪುರದ 5ನೇ ವಾರ್ಡ್‌ನ ತಿಮ್ಮಕ್ಕ ಬಡಾವಣೆಯಲ್ಲಿ ನಗರಸಭೆ ಉಪಾಧ್ಯಕ್ಷ ಹಾಗೂ ವಾರ್ಡ್ ಸದಸ್ಯರಾದ ಜೆ. ನಾಗರಾಜ್ ಅವರ ನೇತೃತ್ವದಲ್ಲಿ 150 ಮೀಟರ್ ಚರಂಡಿ ಮತ್ತು ಸ್ಲಾಬ್ ಅಳವಡಿಕೆಗೆ ಗುದ್ದಲಿ ಪೂಜೆ ನೆರವೇರಿಸಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಜೆ. ನಾಗರಾಜ್ ಮಾತನಾಡಿ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಜವಾಬ್ದಾರಿ ನಮ್ಮದು.ಜನರ ಸಮಸ್ಯೆಗಳನ್ನು ಆಲಿಸುವುದರಲ್ಲಿ ಸಿಗುವ ಖುಷಿ ಬೇರೆ ಯಾವುದರಲ್ಲೂ ಸಿಗಲ್ಲ