ವಿಜಯಪುರ ಜಿಲ್ಲೆಯ ಕೆಲವು ಶಾಲಾ ಕಾಲೇಜುಗಳಲ್ಲಿ ಅನುಮತಿ ಇಲ್ಲದೇ ವಸತಿ ನಿಲಯಗಳನ್ನು ನಡೆಸುತ್ತಿದ್ದಾರೆ ಹೀಗಾಗಿ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಹೋರಾಟ ಮಾಡಲು ಸಜ್ಜಾಗಿದ್ದೇವೆ ಎಂದು ವಿಜಯಪುರದಲ್ಲಿ ಮಂಗಳವಾರ ಮಧ್ಯಾನ 2 ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಉತ್ತರ ಕರ್ನಾಟಕ ಅಧ್ಯಕ್ಷ ಲಕ್ಷ್ಮಣ್ ಕಂಬಾಗಿ ಹೇಳಿದರು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಶಾಲೆಗಳಲ್ಲಿ ಅನುಮತಿ ಇಲ್ಲದೆ ವಸತಿ ನಿಲಯಗಳನ್ನು ನಡೆಸುತ್ತಿದ್ದಾರೆ, ಕೂಡಲೇ ಅಧಿಕಾರಿಗಳು ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದರು.