ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶನಿವಾರ ಬೆಳ್ಳುಳ್ಳಿ ದರ ಕುಸಿದಿದ್ದರಿಂದ, ಆಕ್ರೋಶಗೊಂಡ ರೈತರು ಬೆಳ್ಳುಳ್ಳಿಯನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ನಡೆಸಿದರು. ರೈತರು ತಂದ ಬೆಳ್ಳುಳ್ಳಿ ಬೆಲೆಗಳಿಗೆ ವ್ಯಾಪಾರಸ್ಥರು ಇಲ್ಲದೇ ಇರುವದರಿಂದ ಬೆಲೆ ಸಿಗುತ್ತಿಲ್ಲ. ದಲ್ಲಾಳಿಗಳು ಖರಿಧಿಸಲು ಹಿಂದೆಮುಂದೆ ನೋಡುತ್ತಿದ್ದಾರೆ ಅಂತ ತಮ್ಮ ಅಳಲು ತೋಡಿಕೊಂಡಿದರು.