ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದು ಅಪಾಯದ ಮಟ್ಟ ಮೀರಿ ನೀರು ಹರಿಯಲಾರಂಭಿಸಿವೆ. ಇದರಿಂದ ಸಾರ್ವಜನಿಕರು ನದಿಯ ದಡದ ಕಡೆ ಹೋಗದಂತೆ ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದರು ಗುರುವಾರ ಸಂಜೆ ತಿಥಣಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಕೆಲ ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪೇದೆ ದಯಾನಂದ ಜಮಾದಾರ್ ಸೆಲ್ಫಿಗೆ ಮುಂದಾದ ಯುವಕರೇ ತರಾಟೆಗೆ ತೆಗೆದುಕೊಂಡು ಓಡಿಸಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ನದಿಯ ಕಡೆಗೆ ಬಾರದಂತೆ ಎಚ್ಚರಿಕೆ ನೀಡಿದರು.