ಮಳೆ ಬಂದರೆ ಗದ್ದೆಯಂತಾಗುವ ರಸ್ತೆ ಬಗ್ಗೆ ಗ್ರಾಮಸ್ಥರು ನಿರಂತರ ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಗದ್ದೆಯಂತಾದ ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲೂಕು ಹರದನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಹದೇವನಗರದಲ್ಲಿ ಗ್ರಾಮಸ್ಥರ ಪ್ರತಿಭಟನಾರ್ಥಕವಾಗಿ ರಸ್ತೆಯಲ್ಲಿ ನಾಟಿ ಮಾಡಿದರು.