ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ ಇನ್ನಾ ಶರಾವತಿ ಜಲನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ ನೀರನ್ನು ಕ್ರಸ್ಟ್ ಗೇಟ್ ಗಳ ಮೂಲಕ ಹರಿಬಿಡುತ್ತಿರುವ ಹಿನ್ನೆಲೆ ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ . ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತವನ್ನು ನೋಡಲು ಬುಧವಾರ ಪ್ರವಾಸಿಗರ ದಂಡು ಆಗಮಿಸಿದೆ. ಜೋಗ ಜಲಪಾತದ ರಮಣೀಯ ದೃಶ್ಯವನ್ನು ಪ್ರವಾಸಿಗರು ಕಣ್ತುಂಬಿಸಿಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡು ಬಂದಿತ್ತು.