ಕಾರು ಹಾಗು ಆಟೋ ನಡುವೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾದ ಘಟನೆ ನಗರದ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಲ್ ಒಕೆ ಬಳಿ ಬುಧವಾರ ನಡೆದಿದೆ. ಆಟೋ-ಕಾರಿನ ನಡುವೆ ಡಿಕ್ಕಿಯಾದ ಹಿನ್ನಲೆ ಕಾರಿನ ಹಿಂಭಾಗ ಆಟೋದ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಆಟೋದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.