ಯಲಬುರ್ಗಾ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅವಳಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳು ಪ್ರಗತಿ ಸಭೆ ನಡೆಯಿತು. ಸೆಪ್ಟೆಂಬರ್ 26 ರಂದು ಮಧ್ಯಾಹ್ನ 1-30 ಗಂಟೆಗೆ ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿಶ್ರೀನಿವಾಸ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಗ್ಯಾರಂಟಿ ಯೋಜನೆ ಕುರಿತು ಚರ್ಚೆ ನಡೆಸಿದರು. ಯಲಬುರ್ಗಾ ಕುಕನೂರು ಅವಳಿ ತಾಲೂಕು ಸಮಿತಿಯ ಅಧ್ಯಕ್ಷರು, ತಾಲೂಕು ಹಾಗೂ ಜಿಲ್ಲಾ ಸಮಿತಿಯ ಸದಸ್ಯರು, ತಹಶಿಲ್ದಾರರು, ತಾ.ಪಂ ಇಒ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.