ಶಹಾಪುರ ನಗರದ ವಸತಿ ನಿಲಯ ಒಂದರಲ್ಲಿನ 9ನೇ ತರಗತಿಯ ವಿದ್ಯಾರ್ಥಿನಿಗೆ ಹೆರಿಗೆಯಾಗಿರುವ ಘಟನೆಗೆ ಸಂಬಂಧಿಸಿ ಗುರುವಾರ ಮಧ್ಯಾಹ್ನ ಶಹಾಪುರ ನಗರದ ತಾಲೂಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಹರ್ಷಲ್ ಬೋಯರ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಜಿಲ್ಲಾ ಪಂಚಾಯಿತಿಯ ಸಿಇಓ ಲಭಿಸಿ ಒರಡಿಯ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಮಕ್ಕಳನ್ನು ಪೋಷಕರು ಶಾಲೆಯಿಂದ ಮರಳಿ ಕರೆಯಿಸಿಕೊಳ್ಳಬೇಡಿ ಎಂದು ಆತಂಕ ದೂರ ಮಾಡಿದ್ದಾರೆ.