ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಸಂಭಂಧ ಇಬ್ಬರು ಆರೋಪಿಗಳನ್ನ ಬಿಡದಿ ಪೊಲೀಸರು ಬಂಧಿಸಿದ್ದಾರೆ.ಕಂಚುಗಾರನಹಳ್ಳಿ ಗ್ರಾಮದ ಲೋಕೇಶ್ ಅವರ ಬೈಕ್ ಅನ್ನ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ರು. ಪ್ರಕರಣದಲ್ಲಿ ಆರೋಪಿಗಳ ಪತ್ತೆ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ, ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ವಿವಿದಡೆ ಕಳ್ಳತನ ಮಾಡಿದ್ದ ಸುಮಾರು 3 ಲಕ್ಷ ರೂ ಮೌಲ್ಯದ, 6 ದ್ವಿಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡು, ಒಟ್ಟು 6 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಸೋಮವಾರ ಪ್ರಕಟಣೆ ಮೂಲಕ ತಿಳಿಸಲಾಗಿದೆ.