ಇತ್ತೀಚಿನ ದಿನಗಳಲ್ಲಿ ದೇಶದ್ರೋಹ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಆರೋಪಗಳು ನಿರಂತರವಾಗಿ ಕೇಳಿ ಬರುತ್ತಿದ್ದು ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಮೊನ್ನೆ ರಾತ್ರಿ ಈದ್ ಮಿಲಾದ್ ಅಂಗವಾಗಿ ಅಲಂಕಾರ ಮಾಡುವ ಸಂದರ್ಭದಲ್ಲಿ ಕೆಲ ಮುಸ್ಲಿಂ ಯುವಕರು ಪಾಕಿಸ್ತಾನ್ ಕಿ ಜೈ ಎಂದು ಘೋಷಣೆ ಕೂಗಿದ್ದಾರೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂ ಸಂಘಟನೆಗಳ ಮುಖಂಡರು ನೀಡಿದ ದೂರಿನ ಆಧಾರದ ಮೇಲೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಪೊಲೀಸ್ ಇಲಾಖೆ ಈ ವಿಡಿಯೋವನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿದೆ.