2025-26ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟಗಳಲ್ಲಿ ಬೆಸ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಖೋ ಖೋ ಮತ್ತು ಥ್ರೋ ಬಾಲ್ ಪಂದ್ಯಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೂ ಹ್ಯಾಮರ್ ಥ್ರೋ ನಲ್ಲಿ ರಮ್ಯ, ಮತ್ತು ಯೋಗದಲ್ಲಿ ದೀಕ್ಷಿತ್ ಹಾಗು ತ್ರಿಶಾಂತ್ ಎಂಬ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿಯನ್ನು ತಂದಿರುತ್ತಾರೆ.