ಕಾರವಾರ ಅಮದಳ್ಳಿಯ ಶ್ರೀ ಬಾಲ ವೀರಗಣಪತಿ ದೇವಸ್ಥಾನದಲ್ಲಿ ಗಣೇಶೋತ್ಸವದ ಹಿನ್ನೆಲೆ ಗುರುವಾರ ಸಂಜೆ 6ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬಿರುಸಾದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ವಿವಿಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚತುರ್ಥಿಯ ನಿಮಿತ್ತ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ಆಯೋಜಿಸಲಾಗಿತ್ತು. ಅಭಿಷೇಕ, ಗಣಹೋಮ, ಮಹಾ ಮಂಗಳಾರತಿ, ಪ್ರದೋಶ ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ದೇವಸ್ಥಾನದಲ್ಲಿ ನಡೆದವು.