ಕರ್ನಾಟಕ ಭೇಟಿಯಲ್ಲಿರುವ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಸೆಪ್ಟೆಂಬರ್ 13ರಂದು ಮಧ್ಯಾಹ್ನ 4ಗಂಟೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರನ್ನ ಭೇಟಿಯಾದರು. ಕಾಮನ್‌ವೆಲ್ತ್ ಸಂಸದೀಯ ಸಂಘದ ಭಾರತ ವಲಯದ 11ನೇ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿರುವ ಓಂ ಬಿರ್ಲಾ ಅವರು ಬಸವರಾಜ ಬೊಮ್ಮಾಯಿ ಅವರನ್ನ ಸೌಹಾರ್ದಯುತವಾಗಿ ಭೇಟಿಯಾಗಿ ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಸಂಸದ ಡಾ. ಕೆ. ಸುಧಾಕರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಮತ್ತಿತರರು ಹಾಜರಿದ್ದರು.