ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಡಾಡಿ ಜಾನುವಾರುಗಳ ಸಂಖ್ಯೆ ಹೆಚ್ಚಾಗಿದ್ದು, ರಸ್ತೆಯಲ್ಲಿ ಅಡ್ಡದಿಡ್ಡಿಯಾಗಿ ಓಡಾಡುತ್ತ ವಾಹನಗಳ ಓಡಾಟಕ್ಕೆ ತುಂಬಾ ತೊಂದರೆಯಾಗಿದ್ದು, ಅಪಘಾತಗಳು ಸಂಭವಿಸುತ್ತಿರುವುದರಿಂದ ಗ್ರಾಮ ಪಂಚಾಯತಿಗೆ ಹಲವರು ದೂರು ನೀಡಿದ ಹಿನ್ನಲೆ ಗ್ರಾಮ ಪಂಚಾಯತಿಯವರು ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡಲಾಗುವುದು ಎಂದು ಹಲವು ದಿನಗಳ ಹಿಂದೆ ಸಭೆ ನಡೆಸಿ ಗ್ರಾಮಸ್ಥರಿಗೆ ಸೂಚನೆ ನೀಡಿದ್ದರು. ಜಯಪುರ ಗ್ರಾಮ ಪಂಚಾಯತಿಯವರು ಹಾಗೂ ಪೋಲಿಸ್ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಸುಮಾರು 15 ಬಿಡಾಡಿ ದನಗಳನ್ನು ಹಿಡಿಯುವ ಮೂಲಕ ಯಶಸ್ವಿ ಕಾರ್ಯಾಚರಣೆ ನಡೆಸಿದ್ರು.