ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸಂಸದ ಡಾ. ಸಿ. ಎನ್. ಮಂಜುನಾಥ್ ಪರಿಶೀಲನೆ ನಡೆಸಿದರು. ಶೇಷಾಗಿರಿಹಳ್ಳಿ ಹಾಗೂ ಲಕ್ಷ್ಮೀಸಾಗರ ಗೇಟ್‌ಗಳ ಬಳಿ ವಾಹನ ಸಂಚಾರ ಹಾಗೂ ಸ್ಥಳೀಯರ ಓಡಾಟಕ್ಕೆ ತೊಂದರೆ ಉಂಟಾಗುತ್ತಿರುವ ಕುರಿತು ಸ್ಥಳೀಯರು ಮಂಜುನಾಥ್ ರವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆ ಹರಿಸುವಂತೆ ತಾಕೀತು ಮಾಡಿದರು.