ಚಿತ್ರದುರ್ಗ,ಸೆ.12: ಮಾನಸಿಕ ಆರೋಗ್ಯ ಕಾಯ್ದೆ ಅನ್ವಯ ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. 15 ದಿನದ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಮಂಡಳಿ ಸ್ಥಾಪನೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಕ್ರಮ ಕೈಗೊಳ್ಳಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಸೂಚನೆ ನೀಡಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದ 1ನೇ ಮಹಡಿಯಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ಶುಕ್ರವಾರ ಮಾನಸಿಕ ಆರೋಗ್ಯ ವಿಮರ್ಶೆ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಮಂಡಳಿಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ ಎಂದರು.