ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 110 ನೇ ಜಯಂತಿ ಮಹೋತ್ಸವ ಪ್ರಯುಕ್ತ ಚಾಮರಾಜನಗರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿಗಳ ಅನುಭವ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.