ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಸ್ತುತ 2024-25ನೇ ಸಾಲಿನಲ್ಲಿ 93ಕೋಟಿ 3ಲಕ್ಷ 6 ಸಾವಿರದ 756 ರೂಗಳ ವಹಿವಾಟು ನಡೆಸಿದ್ದು, ಈ ಸಾಲಿನಲ್ಲಿ 8ಕೋಟಿ 3 ಲಕ್ಷ 45 ಸಾವಿರದ 244 ರೂ.ಗಳ ನಿವ್ವಳ ಲಾಭಗಳಿಸಿ ಪ್ರಗತಿಯ ಹಾದಿಯಲ್ಲಿ ಸಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಹೇಳಿದರು.ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಸರ್ಕಾರದಿಂದಾಗಲೀ, ಇನ್ನಾವುದೇ ಮೂಲದಿಂದಾಗಲಿ ಯಾವುದೇ ಅನುದಾನ ದೊರೆತಿಲ್ಲ ಎಂದರು.