ದಾಂಡೇಲಿ : ನಾಡಿನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುವ ಮೂಲಕ ಕೋಟ್ಯಾಂತರ ಭಕ್ತರ ಆರಾಧ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಮತ್ತು ಷಡ್ಯಂತ್ರವನ್ನು ಖಂಡಿಸಿ ದಾಂಡೇಲಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತವೃಂದದಿಂದ ಆ.26 ರಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಆ.26 ರ ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಸರಿಯಾಗಿ ಅಂಬೇವಾಡಿಯ ಶ್ರೀ ಮಹಾಗಣಪತಿ ದೇವಸ್ಥಾನದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಂಘಟಕ ಸಂದೇಶ್ ಎಸ್ ಜೈನ್ ಸೋಮವಾರ ಸಂಜೆ 4.30 ಗಂಟೆಗೆ ಮಾಹಿತಿ ನೀಡಿದ್ದಾರೆ.