ವಿವಾದಿತ ಫ್ಲೆಕ್ಸ್ ತೆರವು ಮಾಡಿದ್ದನ್ನು ಪ್ರಶ್ನಿಸಿ ಪ್ರತಿಭಟಿಸಿದ್ದ ಹಿಂದೂ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಿದ್ದ ಪೊಲೀಸರು ಈಗ ಬಿಡುಗಡೆ ಮಾಡಿದ್ದಾರೆ. ಮಟ್ಟಿಕಲ್‌ನಲ್ಲಿ ಅಫ್ಜಲ್ ಖಾನ್‌ನನ್ನು ಛತ್ರಪತಿ ಶಿವಾಜಿ ಕೊಂದ ಫ್ಲೆಕ್ಸ್ ಹಾಕಲಾಗಿತ್ತು. ಎಚ್ಚೆತ್ತ ಪೊಲೀಸರು ತಕ್ಷಣ ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ತೆರವು ಮಾಡಿದ್ದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ದಕ್ಷಿಣ ವಿಭಾಗೀಯ ಸಹ ಸಂಚಾಲಕ ಸತೀಶ್ ಪೂಜಾರಿ ಮುಂಚೂಣಿಯಲ್ಲಿದ್ದರು.