ಧಾರವಾಡ ಟೋಲ್ ನಾಖಾ ಬಳಿಯ ಶಿವಾನಂದ ನಗರ ಹಾಗೂ ಚಪ್ಪರಬಂದ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಹಿಡಿದು ತಡ ರಾತ್ರಿ ಓಡಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ವಿಕೃತಿ ಮೆರೆದು, ಜನರಲ್ಲಿ ಆತಂಕ ಸೃಷ್ಟಿಸಿದ್ದಾರೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು. ಗುರುವಾರ ಬೆಳಗ್ಗೆ 11 ಗಂಟೆಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.