ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾರವಾರ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ನಗರದಲ್ಲಿ ರವಿವಾರ ಸಂಜೆ 5.30ಕ್ಕೆ ಸೈಕ್ಲೊಥಾನ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ನಗರದ ಜನರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವಿಧ ವಯೋಮಾನದ ಅನೇಕ ಸೈಕ್ಲಿಸ್ಟ್ಗಳು ಈ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಈ ಸೈಕ್ಲೊಥಾನ್ ನಗರದಾದ್ಯಂತ ಸಂಚರಿಸಿ ಸಾರ್ವಜನಿಕರಲ್ಲಿ ಆರೋಗ್ಯಕರ ಜೀವನಶೈಲಿ ಮತ್ತು ಕ್ರೀಡಾ ಚಟುವಟಿಕೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿತು.