ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದರೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಶುಕ್ರವಾರ ಮದ್ಯಾಹ್ನ 3ಗಂಟೆ ಎಬಿವಿಪಿ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಲಾಯಿತು. ರಾಜ್ಯದಲ್ಲಿ ಶೇಕಡ 50ರಷ್ಟು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಕೂಡಲೇ ಸರ್ಕಾರ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.