ರಸ್ತೆಯಲ್ಲಿ ವಾಹನಗಳನ್ನು ಬೇಕಾ ಬಿಟ್ಟಿಯಾಗಿ ಅವೈಜ್ಞಾನಿಕವಾಗಿ ಎಲ್ಲಂದರೆ ನಿಲ್ಲಿಸಿದ್ದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ದೇವಸ್ಥಾನಕ್ಕೆ ಬಂದಿದ್ದ ಭಕ್ತರು ವಾಹನ ಸವಾರರು ಹಾಗೂ ಸ್ಥಳೀಯರು ಪರದಾಟ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಆಯುಧ ಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಶೃಂಗೇರಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆದ್ದರಿಂದ ವಾಹನ ದಟ್ಟಣೆಯೂ ಕೂಡ ಹೆಚ್ಚಾಗಿತ್ತು ಆದರೆ ವಾಹನಗಳನ್ನು ಬೇಕಾ ಬಿಟ್ಟಿಯಾಗಿ ಪಾರ್ಕಿಂಗ್ ಮಾಡಿದ್ದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಕೆಲಕಾಲ ಅಡಚಣೆ ಉಂಟಾಗಿತ್ತು.