ಗಣೇಶ ಹಬ್ಬದ ವಿಸರ್ಜನೆ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಈಗಾಗಲೇ 1000 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಿರುತ್ತದೆ. ಸದರಿ ಸಿಸಿಟಿವಿ ಕ್ಯಾಮೆರಾ ಗಳನ್ನು ಈಗಾಗಲೇ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ವೃತ್ತಗಳಲ್ಲಿ, ರಸ್ತೆಗಳಲ್ಲಿ ಅಳವಡಿಸಲಾಗಿರುತ್ತದೆ. ಸಿಸಿ ಟಿವಿ ಕ್ಯಾಮೆರಾ ಗಳು ಹೆಚ್ಚಿನ ದೂರದವರೆಗೆ ಸ್ಪಷ್ಟವಾದ ರೀತಿಯಲ್ಲಿ ಕವರೇಜ್ ಹೊಂದಿದ್ದು ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.